ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.
ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅವರು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ರಣಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಕೋಮು ಗಲಭೆಗಳು ಸೃಷ್ಟಿಯಾಗಲಿವೆ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಕಾಂಗ್ರೆಸ್ ತೀವ್ರವಾಗಿ ಕಿಡಿಕಾರಿದ್ದು, ಉದ್ದೇಶಪೂರ್ವಕವಾಗಿ ಅಮಿತ್ ಶಾ ಅವರು ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಬಿಜೆಪಿಯ ಸಮಾವೇಶಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.