ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪ್ರಚೋದನಕಾರಿ ಹೇಳಿಕೆ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅವರು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ರಣಕಣ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ, ಕೋಮು ಗಲಭೆಗಳು ಸೃಷ್ಟಿಯಾಗಲಿವೆ” ಎಂದು ಅಮಿತ್ ಶಾ ಹೇಳಿಕೆ ನೀಡಿದ್ದರು.

“ಬಿಜೆಪಿ ಪರ ಮತ ಹಾಕುವಂತೆ ಬಿಜೆಪಿ ನಾಯಕರು ಮತದಾರರನ್ನು ಬೆದರಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ವಿರೋಧ ಪಕ್ಷವಾದ ಕಾಂಗ್ರೆಸ್‌ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ವಿರುದ್ಧ ಐಪಿಸಿ 1860 ಮತ್ತು ಪ್ರಜಾಪ್ರತಿನಿಧಿ ಕಾಯಿದೆ, 1951ರ ಅಡಿ ದೂರ ದಾಖಲಿಸಲಾಗಿದೆ.

ಸ್ವತಃ ಗೃಹ ಮಂತ್ರಿಯಿಂದಲೇ ಕೋಮು ದ್ವೇಷದ ಭಾಷಣ ಹೊರಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೋಮು ಗಲಭೆ ಹೆಚ್ಚಾಗಲಿವೆ ಎಂದು ಅಮಿತ್ ಶಾ ಹೇಳಿಕೆ ನೀಡಿದ್ದಾರೆ”. ರಾಜ್ಯದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಅಮಿತ್ ಶಾ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು” ಎಂದು ಕಾಂಗ್ರೆಸ್ ಆಗ್ರಹಿಸಿದೆ.

ದೂರು ನೀಡಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ಸೃಷ್ಟಿಯಾಗಲಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಇದನ್ನು ಅವರು ಹೇಗೆ ಹೇಳುತ್ತಾರೆ? ಹೇಳಿಕೆ ಕುರಿತು ಚುನಾವಣಾ ಆಯೋಗಕ್ಕೂ ದೂರು ನೀಡಿದ್ದೇವೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಹೇಳಿದ್ದಾರೆ.

No Comments

Leave A Comment