Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ನಾಳೆ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ ಗೀತಾ ಶಿವರಾಜ್​ಕುಮಾರ್​!

ಬೆಂಗಳೂರು: ನಟ ಶಿವರಾಜ್​ಕುಮಾರ್​ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.

ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.

ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಸೆಣಸಲಿದ್ದಾರೆ.

ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಧು ಬಂಗಾರಪ್ಪ ಪರ ಗೀತಾ ಶಿವರಾಜ್​ಕುಮಾರ್​ ಪ್ರಚಾರ ನಡೆಸಿದ್ದರು.

No Comments

Leave A Comment