ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ ಗೀತಾ ಶಿವರಾಜ್‌ಕುಮಾರ್!
ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರು ನಾಳೆ (ಶುಕ್ರವಾರ) ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ವರದಿಯಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ನಾಳೆ ಗೀತಾ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ.
ಮಾಜಿ ಸಿಎಂ ದಿವಂಗತ ಎಸ್. ಬಂಗಾರಪ್ಪನವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್‌ನಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು.
ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಮತ್ತು ಕುಮಾರ್ ಬಂಗಾರಪ್ಪ ಅವರು ಕ್ರಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಸೆಣಸಲಿದ್ದಾರೆ.
ಸೊರಬದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಧು ಬಂಗಾರಪ್ಪ ಪರ ಗೀತಾ ಶಿವರಾಜ್‌ಕುಮಾರ್ ಪ್ರಚಾರ ನಡೆಸಿದ್ದರು.