`````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಓದುಗರಿಗೆ ಮತ್ತು ನಮ್ಮ ಜಾಹೀರಾತುದಾರರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು``````````````
ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಮೇ.12ರವರೆಗೆ ವಿಸ್ತರಣೆ
ನವದೆಹಲಿ:ಏ 27. ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ನಡೆಸುತ್ತಿರುವ ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ವಿಸ್ತರಿಸಿದೆ.
ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಸಿಬಿ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಡಿಸಿತ್ತು. ಈ ವೇಳೆ ನ್ಯಾಯಾಲಯ ನ್ಯಾಯಾಂಗ ಬಂಧನವನ್ನು ಮೇ 12 ರವರೆಗೆ ವಿಸ್ತರಿಸಿದೆ.
2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿಬಿಐ ಅವರನ್ನು ಬಂಧಿಸಲಾಗಿತ್ತು.