Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಕಾಪು: ಮೀನುಗಾರರಿಗೆ ಪ್ರಮುಖ 3 ಯೋಜನೆ ಘೋಷಿಸಿದ ರಾಹುಲ್ ಗಾಂಧಿ

ಕಾಪು:ಏ 27. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮೀನುಗಾರರಿಗೆ ಸಬ್ಸಿಡಿ ದರದಲ್ಲಿ ಡೀಸೆಲ್, ವಿಮೆ, ಹಾಗೂ ಮೀನುಗಾರ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಈ ಪ್ರಮುಖ ಮೂರು ಯೋಜನೆಯ ಭರವಸೆಯನ್ನು ರಾಹುಲ್ ಗಾಂಧಿ ಘೋಷಿಸಿದ್ದಾರೆ.

ಗುರುವಾರದ೦ದು ಕಾಪುವಿನ ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೀನುಗಾರರಿಗೆ 10 ಲಕ್ಷ ವಿಮೆ, ಮೀನುಗಾರ ಮಹಿಳೆಯರಿಗೆ ಒಂದು ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಹಾಗೂ ಪ್ರತಿದಿನ 500 ಲೀಟರ್‌ಗೆ ಮೀನುಗಾರರಿಗೆ 25 ರೂ. ಸಬ್ಸಿಡಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಸಹಸ್ರ ಸಂಖ್ಯೆಯಲ್ಲಿ ‌ಮೀನುಗಾರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

No Comments

Leave A Comment