ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್; ಒಬ್ಬ ಸಹೋದರನ ಗೆಲ್ಲಿಸಲು ಮತ್ತೊಬ್ಬ ಸಹೋದರನ ವಿರುದ್ಧ ಪ್ರಚಾರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಪತ್ನಿ, ಡಾ. ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಮಧು ಬಂಗಾರಪ್ಪ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಗೀತಾ ಅವರ ಸಹೋದರ ಮಧು ಬಂಗಾರಪ್ಪ ಅವರು ಸ್ಪರ್ಧಿಸಿದ್ದಾರೆ. ಅವರು ಸಹೋದರ ಕುಮಾರ್ ಬಂಗಾರಪ್ಪ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.
ಪ್ರತಿ ಬಾರಿಯೂ ಮಧು ಬಂಗಾರಪ್ಪನವರನ್ನು ಬೆಂಬಲಿಸುತ್ತಾ ಬಂದಿರುವ ಗೀತಾ ಶಿವರಾಜ್ ಕುಮಾರ್ ಅವರು ಈ ಬಾರಿಯೂ ತಮ್ಮ ಕಿರಿಯ ಸಹೋದರನ ಪರ ಪ್ರಚಾರ ನಡೆಸಲಿದ್ದಾರೆ. ಒಬ್ಬ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗಿರುವ ಗೀತಾ ಅವರು ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ.
ಈಗಾಗಲೇ ನಟ ಶಿವರಾಜ್ ಕುಮಾರ್ ಸಹ ಗೀತಾ ಜೊತೆ ಪ್ರಚಾರಕ್ಕೆ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕಾಂಗ್ರೆಸ್ಗೆ ತಾರಾಬಲ ಬಂದಂತಾಗಿದೆ.