ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಹುಬ್ಬಳ್ಳಿ: ರಕ್ತದಲ್ಲಿ ಪತ್ರ ಬರೆದಿದ್ದ ಅಭಿಮಾನಿ ನಿವಾಸಕ್ಕೆ ಜಗದೀಶ್ ಶೆಟ್ಟರ್ ಭೇಟಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ನಲ್ಲಿ ಜಗದೀಶ್ ಶೆಟ್ಟರ್ ಅವರು 100ಕ್ಕೆ 100 ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದಿದ್ದ ಯುವಕ ಮಂಜುನಾಥ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭೇಟಿ ಅವರು ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದು ಕೊಡುತ್ತೇನೆ ಶೆಟ್ಟರ್ ಗೆಲ್ಲುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಅವರು, 100ಕ್ಕೆ 100 ಜಗದೀಶ್ ಶೆಟ್ಟರ್ ಗೆಲ್ಲುತ್ತಾರೆ ಎಂದು ರಕ್ತದಲ್ಲಿ ಪತ್ರ ಬರೆದು ತಿರುಗೇಟು ನೀಡಿದ್ದರು.
ಮಂಜುನಾಥ್ ಅವರ ಮನೆಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಅವರು, ತಮ್ಮ ಗೆಲುವಿಗಾಗಿ ರಕ್ತದಲ್ಲಿ ಶುಭ ಹಾರೈಸಿದ ಮಂಜುನಾಥನಿಗೆ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಮಂಜುನಾಥ್ ಸಹ ಚುನಾವಣೆಯಲ್ಲಿ ಗೆಲುವು ನಿಮ್ಮದಾಗಲಿ ಎಂದು ಜಗದೀಶ್ ಶೆಟ್ಟರ್ ಅವರಿಗೆ ಶುಭ ಹಾರೈಸಿದರು.