ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಹಿರಿಯಡ್ಕ: ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮನರಸಿಂಹ ಜಯಂತಿ
ಉಡುಪಿ: ನರಸಿಂಹ ಜಯಂತಿಯನ್ನು ಗುರುವಾರ ಹಿರಿಯಡ್ಕ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು.