Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ತೆಲಂಗಾಣದಲ್ಲಿ ನಕ್ಸಲ್ ಎನ್ಕೌಂಟರ್: ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದ ಸೇನೆ

ಹೈದರಾಬಾದ್: ತೆಲಂಗಾಣದಲ್ಲಿ ಭಾನುವಾರ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಇಬ್ಬರು ಮಾವೋವಾದಿಗಳ ಹೊಡೆದುರುಳಿಸಿದೆ.

ನಕ್ಸಲ್ ವಿರುದ್ಧದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಹತ್ಯೆಯಾಗಿರುವ ಘಟನೆ ಛತ್ತೀಸಗಡಕ್ಕೆ ಹೊಂದಿಕೊಂಡಿರುವ ತೆಲಂಗಾಣದ ಗಡಿ ಜಿಲ್ಲೆಯಾಗಿರುವ ಭದ್ರಾದ್ರಿ ಕೊತ್ತಾಗುಡಂ ಜಿಲ್ಲೆಯ ಅರಣ್ಯದಲ್ಲಿ ಭಾನುವಾರ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಗೆ ಸೇರಿದ ಇಬ್ಬರು ನಕ್ಸಲರು ಹತ್ಯೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತೆಲಂಗಾಣ-ಛತ್ತೀಸ್‌ಗಢ ಗಡಿಯಲ್ಲಿರುವ ಮಂಡಲದ ಪುಟ್ಟಪಾಡು ಅರಣ್ಯದಲ್ಲಿ ಗ್ರೇಹೌಂಡ್ಸ್ ಪಡೆಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರು ಉಪಸ್ಥಿತಿ ಕಂಡ ಸೈನಿಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ನಕ್ಸಲರು ಹತರಾಗಿದ್ದಾರೆ.

No Comments

Leave A Comment