ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಬಜರಂಗದಳ ನಿಷೇಧ ವಿವಾದ: ಮೇ 9 ರಂದು ವಿಎಚ್‌ಪಿ, ಬಜರಂಗದಳ ಪ್ರತಿಭಟನೆ, ರಾಷ್ಟ್ರವ್ಯಾಪಿ ‘ಹನುಮಾನ್ ಚಾಲೀಸಾ’ ಪಠಣ
ನವದೆಹಲಿ: ಬಜರಂಗದಳ ನಿಷೇಧ ಮಾಡುವ ಕಾಂಗ್ರೆಸ್ ಪಕ್ಷದ ನಿರ್ಧಾರದ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದ್ದು, ವಿಎಚ್‌ಪಿ, ಬಜರಂಗದಳ ಮೇ 9ರಂದು ಅಂದರೆ ಕರ್ನಾಟಕ ಚುನಾವಣೆ ಮತದಾನಕ್ಕೂ ಒಂದು ದಿನ ಮುಂಚಿತವಾಗಿ ದೇಶಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ದಿನ ಮುಂಚಿತವಾಗಿ ನಡೆಯುವ ಮೇ 9 ರಂದು ದೇಶಾದ್ಯಂತ ಹನುಮಾನ್ ಚಾಲೀಸಾ ಪಠಿಸಲು ನಿರ್ಧರಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಅದರ ಯುವ ಘಟಕ ಬಜರಂಗದಳ ಭಾನುವಾರ ಹೇಳಿದೆ.
ಕಳೆದ ವಾರ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಬದ್ಧವಾಗಿದ್ದು, ತಮ್ಮ ಸರ್ಕಾರ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಪಕ್ಷ ಹೇಳಿತ್ತು. ಕಾಂಗ್ರೆಸ್ ಪಕ್ಷದ ಈ ನಡೆ ವಿರುದ್ಧ ಹಿಂದೂಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ದೇಶಾದ್ಯಂತ ಬೃಹತ್ ಪ್ರತಿಭಟನೆಗೆ ಮುಂದಾಗಿದೆ.
ಮೇ 9 ರಂದು ದೇಶಾದ್ಯಂತ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಒಕ್ಕೋರಲಿನಿಂದ ವಿರೋಧಿಸಲು ಮುಂದಾಗಿದೆ. ಈ ಬಗ್ಗೆ ಮಾತನಾಡಿರುವ ವಿಎಚ್‌ಪಿ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಪರಾಂಡೆ ಅವರು, ‘ಭಯೋತ್ಪಾದಕರು, ಭಾರತ್ ವಿರೋಧಿಗಳ ಪರ ವಕಾಲತ್ತು ವಹಿಸುವ ಮತ್ತು ಉತ್ತೇಜಿಸಲು ನಿಂತಿರುವ ಕಾಂಗ್ರೆಸ್ ಮತ್ತು ಇತರ ಸಂಘಟನೆಗಳು ಮತ್ತು ಕಾರ್ಯಕರ್ತರಿಗೆ ಸದ್ಬುದ್ಧಿ (ಸದ್ಬುದ್ಧಿ) ನೀಡಲು ಭಜರಂಗ ಬಲಿ (ಹನುಮಾನ್) ಅನ್ನು ಆಹ್ವಾನಿಸಲು ಕಾರ್ಯಕ್ರಮವನ್ನು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.