Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಉಡುಪಿ : ಹೆಣ್ಣು ಮಗುವಿನ ಮೃತದೇಹ ಪತ್ತೆ – ಪ್ರಕರಣ ದಾಖಲು

ಉಡುಪಿ:ಮೇ7.ಸರಕಾರಿ ಕೊಳದ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆಯಾದ ಘಟನೆ ಶಿರ್ವ ಸಮೀಪದ ಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರ್ಲಪಲ್ಕೆಯಲ್ಲಿ ನಡೆದಿದೆ.

ಬೆಳ್ಳೆ ಗ್ರಾಮ ಪಂಚಾಯಿತಿಯ ಒಂದನೇ ವಾರ್ಡಿನ ಸದಸ್ಯ ಅಶೋಕ್ ಅವರು ಈ ವಿಷಯ ತಿಳಿದ ಕೂಡಲೇ ಬೆಳ್ಳೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಧಾಕರ ಪೂಜಾರಿ ಅವರಿಗೆ ಮಾಹಿತಿ ನೀಡಿದ್ದಾರೆ. ಕೊಳದ ಪಕ್ಕದಲ್ಲಿ ಶವ ಪತ್ತೆಯಾಗಿದ್ದು, ಮಗುವನ್ನು ಆಕೆಯ ಪೋಷಕರು ಉದ್ದೇಶಪೂರ್ವಕವಾಗಿ ಬಿಸಾಡಿರಬಹುದು ಎಂಬ ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment