ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕರ್ನಾಟಕ ಚುನಾವಣೆ: ಒಟ್ಟು 375 ಕೋಟಿ ರೂ. ನಗದು, ವಸ್ತು ವಶ; ಕಳೆದ ಬಾರಿಗಿಂತ 4.5 ಪಟ್ಟು ಹೆಚ್ಚಳ!

ನವದೆಹಲಿ: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನಾ ಒಟ್ಟು 375 ಕೋಟಿ ರೂಪಾಯಿ ನಗದು ಹಾಗೂ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ ಮತ್ತು ದಕ್ಷಿಣ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಜಾರಿ ನಿರ್ದೇಶನಾಲಯ 288  ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.

ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಚುನಾವಣಾ ಆಯೋಗ ಈ ಮಾಹಿತಿ ಬಹಿರಂಗಪಡಿಸಿದೆ. 2018 ರ ವಿಧಾನಸಭಾ ಚುನಾವಣೆಗೆ ಹೋಲಿಸಿದರೆ ಗಮನಾರ್ಹ ರೀತಿಯಲ್ಲಿ 4.5 ಪಟ್ಟು ಹೆಚ್ಚಾಗಿದೆ ಎಂದು ಹೇಳಿದೆ. ಕಟ್ಟುನಿಟ್ಟಾದ ಮುಂಜಾಗ್ರತೆ, ವ್ಯಾಪಕ ಮೇಲ್ವಿಚಾರಣೆ, ನೆರೆಯ ರಾಜ್ಯಗಳೊಂದಿಗೆ ಸಮನ್ವಯತೆ ಮತ್ತು ಅಂತರ ಸಂಸ್ಥೆಗಳ ಸಮನ್ವಯದಿಂದ ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಅಕ್ರಮ ವಸ್ತುಗಳ ಸಾಗಟ ಕುರಿತು ಪರಿಶೀಲಿಸಲಾಗಿದ್ದು, 147.46 ಕೋಟಿ ರೂ. ನಗದು ಮತ್ತು 83.66 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಸಮಿತಿ ತಿಳಿಸಿದೆ.

ಇದರಲ್ಲಿ 23.6 ಕೋಟಿ ಮೌಲ್ಯದ ಔಷಧಗಳು, 96.6 ಕೋಟಿ ಮೌಲ್ಯದ ಅಮೂಲ್ಯ ಲೋಹಗಳು ಮತ್ತು 24.21 ಕೋಟಿ ಮೌಲ್ಯದ ಉಡುಗೊರೆಗಳು ಸೇರಿವೆ. 2023ರಲ್ಲಿ ಒಟ್ಟು 375 ಕೋಟಿ ರೂ.ಗೂ ಅಧಿಕ ಮೊತ್ತದ ನಗದು ಹಾಗೂ ವಸ್ತುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಇದು 2018ರ ವಿಧಾನಸಭೆ ಚುನಾವಣೆಗೆ (  83.93 ಕೋಟಿ ರೂ) ಹೋಲಿಸಿದರೆ 4.5 ಪಟ್ಟು ಹೆಚ್ಚಾಗಿದೆ.

ಅಲ್ಲದೇ ಮಾರ್ಚ್ ಎರಡನೇ ವಾರದಲ್ಲಿ ಆಯೋಗದ ಭೇಟಿಯ ದಿನಾಂಕದಿಂದ ಚುನಾವಣೆಯ ಘೋಷಣೆಯ ದಿನಾಂಕದವರೆಗೆ, 83.78 ಕೋಟಿ ರೂಪಾಯಿಗಳನ್ನು ವಿವಿಧ ಜಾರಿ ಸಂಸ್ಥೆಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ.
ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ  288 ಕೋಟಿ ರೂಪಾಯಿ ಆಸ್ತಿಯನ್ನು ಇಡಿ  ಜಪ್ತಿ ಮಾಡಿದೆ ಎಂದು ಇಸಿ ಹೇಳಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ  4.04 ಕೋಟಿ ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಬೀದರ್ ಜಿಲ್ಲೆಯಲ್ಲಿ 100 ಕೆಜಿ ಗಾಂಜಾ ವಶಪಡಿಸಿಕೊಳ್ಳುವುದು ಸೇರಿದಂತೆ ಗಮನಾರ್ಹವಾದ ಮದ್ಯ ವಶಪಡಿಸಿಕೊಳ್ಳಲಾಗಿದೆ .ಕಲ್ಬುರ್ಗಿ, ಚಿಕ್ಕಮಂಗಳೂರು ಮತ್ತು ಇತರ ಜಿಲ್ಲೆಗಳಿಂದ ಸೀರೆಗಳು ಮತ್ತು ಆಹಾರ ಕಿಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೈಲಹೊಂಗಲ ಮತ್ತು ಕುಣಿಗಲ್ ಮತ್ತಿತರ ಕಡೆಗಳಿಂದ ಅಪಾರ ಸಂಖ್ಯೆಯ ಪ್ರೆಶರ್ ಕುಕ್ಕರ್ ಮತ್ತು ಅಡುಗೆ ಸಲಕರಣೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅದು ಹೇಳಿದೆ.

ಸಮಿತಿಯು 146 ವೆಚ್ಚ ವೀಕ್ಷಕರನ್ನು ನಿಯೋಜಿಸಿತ್ತು ಮತ್ತು 81 ವಿಧಾನಸಭಾ ಕ್ಷೇತ್ರಗಳನ್ನು  ವೆಚ್ಚದ ಸೂಕ್ಷ್ಮ ಕ್ಷೇತ್ರಗಳೆಂದು ಗುರುತಿಸಲಾಗಿದೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ತೆಲಂಗಾಣ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡಿನ ಗಡಿ ಚೆಕ್ ಪೋಸ್ಟ್‌ಗಳ ಮೂಲಕ ಕಾನೂನು ಸುವ್ಯವಸ್ಥೆ ಮತ್ತು ಅಂತರರಾಜ್ಯ ಸಾಗಾಟದ ಮೇಲೆ ನಿಗಾ ವಹಿಸಿತ್ತು.  ಅಂತಹ ಗಡಿ ಚೆಕ್‌ಪೋಸ್ಟ್‌ಗಳಿಂದ ನಗದು, ಮದ್ಯ, ಡ್ರಗ್ಸ್, ಅಮೂಲ್ಯ ಲೋಹಗಳು ಮತ್ತು ಉಡುಗೊರೆ ವಸ್ತುಗಳು ಸೇರಿದಂತೆ ಸುಮಾರು 70 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಯೋಗ ತಿಳಿಸಿದೆ.

No Comments

Leave A Comment