Log In
BREAKING NEWS >
ಜೂ.26ರ೦ದು ಉಡುಪಿ ಶ್ರೀಪುತ್ತಿಗೆ ಮಠದ ೪ನೇ ಪರ್ಯಾಯಕ್ಕೆ ಕಟ್ಟಿಗೆ ಮುಹೂರ್ತ ಕಾರ್ಯಕ್ರಮ ಜರಗಲಿದೆ.....

ಮೇ 13ಕ್ಕೆ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಮೇ 13ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದು, ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮೇ 13 ರಂದು ನವದೆಹಲಿಯಲ್ಲಿ ಇಬ್ಬರೂ ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಿಶ್ಚಿತಾರ್ಥ ಸಮಾರಂಭಕ್ಕೆ ಸುಮಾರು 150 ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗಷ್ಟೇ ಆಹ್ವಾನ ನೀಡಲಾಗಿದೆ  ಎಂದು ಮೂಲಗಳು ತಿಳಿಸಿವೆ. ರಾಜಕೀಯ ಮತ್ತು ಚಿತ್ರರಂಗದ ಹಲವಾರು ಸದಸ್ಯರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮುಂಬೈನಲ್ಲಿ ರೆಸ್ಟೋರೆಂಟ್​ಗಳ ಬಳಿ, ವಿಮಾನ ನಿಲ್ದಾಣದಲ್ಲಿ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಇತ್ತೀಚೆಗಷ್ಟೇ ಮೊಹಾಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯಾವಳಿ ವೇಳೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಈ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಇದೀಗ ಇಬ್ಬರೂ ನಿಶ್ಚಿತಾರ್ಥಕ್ಕೆ ನಿರ್ಧಾರ ಮಾಡಿರುವ ಹಿನ್ನೆಲೆಯಲ್ಲಿ ರಾಜಕೀಯ ಮತ್ತು ಸಿನಿಗಣ್ಯರು ಸಾಮಾಜಿಕ ಜಾಲತಾಣದಲ್ಲಿ ಜೋಡಿಗೆ ಶುಭ ಕೋರುತ್ತಿದ್ದಾರೆ.

No Comments

Leave A Comment