Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಮತಯಂತ್ರಗಳನ್ನ ಒಡೆದು ಪುಡಿಪುಡಿ ಮಾಡಿದ ಗ್ರಾಮಸ್ಥರು

ವಿಜಯಪುರ:ಮೇ 10. ವಿಜಯಪುರ ಜಿಲ್ಲೆಯಲ್ಲಿ ತಪ್ಪು ಮಾಹಿತಿಯಿಂದಾಗಿ ಗ್ರಾಮಸ್ಥರೇ ಮತಯಂತ್ರಗಳನ್ನು ಒಡೆದು ಪುಡಿಪುಡಿ ಮಾಡಿದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.

ಕಾಯ್ದಿರಿಸಲಾಗಿದ್ದ ಮತಯಂತ್ರಗಳನ್ನು ಬಿಸನಾಳ, ಡೋಣುರ ಗ್ರಾಮದಿಂದ ವಿಜಯಪುರಕ್ಕೆ ವಾಪಸ್ ತೆಗೆದುಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ.

ಇನ್ನು ಅರ್ಧಕ್ಕೆ ಮತದಾನ ಕಾರ್ಯ ಸ್ಥಗಿತಗೊಳಿಸಿ ವಾಪಸ್ ಕೊಂಡೊಯ್ಯಲಾಗುತ್ತಿದೆ ಎಂದು ತಪ್ಪು ಭಾವಿಸಿ ಮತ ಯಂತ್ರ ಒಡೆದು ಹಾಕಿದ್ದಾರೆ.

No Comments

Leave A Comment