ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ಕರ್ನಾಟಕ ಚುನಾವಣಾ ಫಲಿತಾಂಶ 2023; ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧಾರ: JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ
ಬೆಂಗಳೂರು: ಕರ್ನಾಟಕ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕವಷ್ಟೇ ಮೈತ್ರಿ ಬಗ್ಗೆ ನಿರ್ಧಾರಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ಜಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ JDS ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ‘ತನ್ವೀರ್ ಅಹಮದ್ ನಮ್ಮ ವಕ್ತಾರರೂ ಅಲ್ಲ, ನಮ್ಮ ಪಕ್ಷದ ಸದಸ್ಯರೂ ಅಲ್ಲ. ಅವರು ಏನೂ ಅಲ್ಲ, ಅವರು ಬಹಳ ಹಿಂದೆಯೇ ಪಕ್ಷ ತೊರೆದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಗ್ಗೆ ನಾವು ಏನನ್ನೂ ನಿರ್ಧರಿಸಿಲ್ಲ, ಫಲಿತಾಂಶಕ್ಕಾಗಿ ಕಾಯುತ್ತೇವೆ. ಆ ಬಳಿಕವೇ ನಮ್ಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
‘ಸರ್ಕಾರ ರಚಿಸುವ ವಿಶ್ವಾಸವನ್ನು ಹೊರ ಹಾಕಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ. ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜೆಡಿಎಸ್ ರಾಜ್ಯದಲ್ಲಿ ಕಿಂಗ್ ಮೇಕರ್ ಆಗಲಿದೆ. ಸರ್ಕಾರ ರಚಿಸುವ ವಿಶ್ವಾಸವನ್ನು ಹೊರ ಹಾಕಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಳಿ ದುಡ್ಡು ಇದೆ, ನಮ್ಮ ಬಳಿ ಏನೂ ಇಲ್ಲ.
ಹಣ ಇರುವುದರಿಂದ ಎರಡೂ ಪಕ್ಷಗಳು ಸರ್ವೆ ಮಾಡಿಸಿಕೊಂಡಿವೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ರಾಷ್ಟ್ರೀಯ ಪಕ್ಷಗಳು ಮಾಡಿವೆ. ಜೆಡಿಎಸ್ ಪಕ್ಷ ಯಾವುದಕ್ಕೂ ಹಿಗ್ಗುವುದಿಲ್ಲ, ಕುಗ್ಗುವುದೂ ಇಲ್ಲ. ರಾಜ್ಯದಲ್ಲಿ ಜೆಡಿಎಸ್ ಕಿಂಗ್ ಮೇಕರ್ ಆಗುತ್ತೆ. ಈ ಚುನಾವಣೆ ದುಡ್ಡಿನಲ್ಲಿ ನಡೆದಿದೆ. ನಮ್ಮ ಅಭ್ಯರ್ಥಿಗಳು ಯಾವುದೇ ಆಮಿಷಗಳಿಗೆ ಬಲಿಯಾಗಲ್ಲ ಎಂದರು.