ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಂಗಳೂರು: ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ನಡುವೆ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ
ಸುರತ್ಕಲ್:ಮೇ 12. ಸುರತ್ಕಲ್‌ನ ಮುಕ್ಕದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ ಸುಮಾರು 30ಕ್ಕೂ ಅಧಿಕ ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಎರಡು ಬಸ್ ಗಳು ಮಂಗಳೂರು ಕಡೆಗೆ ಸಂಚರಿಸುತ್ತಿದ್ದು, ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಇನ್ನು ಘಟನೆಯಲ್ಲಿ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.