Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಸ್ಥಾನಕ್ಕೆ ಬೊಮ್ಮಾಯಿ ರಾಜಿನಾಮೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ತೀವ್ರ ಹಿನ್ನಡೆ ಅನುಭವಿಸುತ್ತಿರುವಂತೆಯೇ ಅತ್ತ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸ್ಛಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.

ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ, ಕೇಂದ್ರ ನಾಯಕರು ಮತ್ತು ಬಿಜೆಪಿ ಕಾರ್ಯಕರ್ತರು ಸಾಕಷ್ಟು ಪ್ರಯತ್ನಗಳ ಹೊರತಾಗಿಯೂ, ನಾವು ನಿರ್ಧಿಷ್ಠ ಮಟ್ಟದಲ್ಲಿ ಗೆಲುವು ಸಾಧಿಸಲಾಗಲಿಲ್ಲ. ಸಂಪೂರ್ಣ ಫಲಿತಾಂಶ ಬಂದ ನಂತರ ನಾವು ವಿವರವಾದ ವಿಶ್ಲೇಷಣೆ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪಕ್ಷ ಸಂಘಟನೆ ಮಾಡಿ ಉತ್ತಮ ಫಲಿತಾಂಶ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು.

ಇನ್ನು ಇಂದಿನ ಚುನಾವಣಾ ಫಲಿತಾಂಶದಲ್ಲಿ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 120 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಆಡಳಿತಾರೂಢ ಬಿಜೆಪಿ 72 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿ ಕಳೆದ ಬಾರಿಗಿಂತ ಈ ಬಾರಿ 30ಕ್ಕೂ ಅಧಿಕ ಸ್ಥಾನ ಗಳಲ್ಲಿ ಹಿನ್ನಡೆ ಅನುಭವಿಸಿದೆ.

No Comments

Leave A Comment