Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್ ಸೋಲಿನತ್ತ ಮುಖ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿಯೂ ಗೆದ್ದು ಬೀಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ ಸವದಿಗೆ ಗೆಲುವು ಸಿಕ್ಕಿದೆ.

ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಸವದಿ ಭಾರೀ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ ಜಗದೀಶ್ ಶೆಟ್ಟರ್ ಸೋಲಿನತ್ತ ಮುಖ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿಯೂ ಗೆದ್ದು ಬೀಗಿದ್ದರು.

 

No Comments

Leave A Comment