ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

92ನೇ ವಯಸ್ಸಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ ಭಾರತದ ಅತಿ ಹಿರಿಯ ಶಾಸಕರಾದ ಶಾಮನೂರು ಶಿವಶಂಕರಪ್ಪ: 27 ಸಾವಿರ ಮತಗಳ ಅಂತರದಲ್ಲಿ ಭರ್ಜರಿ ಗೆಲುವು!

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಮತ್ತೊಮ್ಮೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಭಾರತ ದೇಶದ ಅತಿ ಹಿರಿಯ ಶಾಸಕ ಎನಿಸಿಕೊಂಡಿದ್ದಾರೆ. ಅವರು ಈ ಬಾರಿ  ಒಟ್ಟು 84,258 ಮತಗಳನ್ನು ಪಡೆದಿದ್ದಾರೆ. ಎದುರಾಳಿ ಅಭ್ಯರ್ಥಿ ಬಿಜೆಪಿಯ ಬಿ ಜಿ ಅಜಯಕುಮಾರ್ 56,410 ಮತಗಳನ್ನು ಪಡೆದಿದ್ದು 27,888 ಮತಗಳ ಅಂತರದಿಂದ ಶಾಮನೂರು ಶಿವಶಂಕರಪ್ಪ ಸೋಲಿಸಿದ್ದಾರೆ.

ಕಾಂಗ್ರೆಸ್‌ನ ಭದ್ರಕೋಟೆ ಆಗಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಶಾಮನೂರು ಶಿವಶಂಕರಪ್ಪ ಅವರ ಗೆಲುವು ಕಠಿಣವಿದೆ ಎಂದೇ ಅಂದಾಜಿಸಲಾಗಿತ್ತು. ಆದರೂ, ಅವರು ಬರೋಬ್ಬರಿ 27,888 ಮತಗಳ ಅಂತರದಿಂದ ಮತ್ತೊಮ್ಮೆ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ 92 ವರ್ಷ ವಯಸ್ಸಿನಲ್ಲೂ ರಾಜಕೀಯ ಹುರುಪು ಉಳಿಸಿಕೊಂಡಿದ್ದಾರೆ.

ಇಲ್ಲಿ ಜೆಡಿಎಸ್ ಅಭ್ಯರ್ಥಿ ಅಮಾನುಲ್ಲಾ ಖಾನ್ 1,296 ಮತಗಳನ್ನು ಗಳಿಸಿದ್ದಾರೆ. ದಾವಣಗೆರೆ ದಕ್ಷಿಣದಲ್ಲಿ ಒಟ್ಟು 2,10,668 ಮತದಾರರಿದ್ದು, ಅವರಲ್ಲಿ 1,45,534 ಮತದಾನವಾಗಿತ್ತು.

No Comments

Leave A Comment