ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಉಡುಪಿ: ಐದು ಕ್ಷೇತ್ರದಲ್ಲೂ ಮತ್ತೆ ಅರಳಿದ ತಾವರೆ – ಹೊಸ ಪ್ರಯೋಗ ಯಶಸ್ವಿ

ಉಡುಪಿ;ಮೇ 13: ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಮಾಡಿದ ಹೊಸ ಪ್ರಯೋಗ ಯಶಸ್ವಿಯಾಗಿದೆ. ಹಾಲಿ ಐವರ ಪೈಕಿ ಕಾರ್ಕಳದ ಸುನೀಲ್ ಕುಮಾರ್ ಹೊರತುಪಡಿಸಿ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಮಣೆ ಹಾಕಿದರೂ ಮತದಾರರೂ ಬಿಜೆಪಿಯ ಕೈ ಹಿಡಿದಿದ್ದಾರೆ.

ಕಾರ್ಕಳದಲ್ಲಿ ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ಅವರು ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರಿಗೆ ಟಫ್ ಫೈಟ್ ಕೊಟ್ಟ ಕಾರಣ ತ್ರಾಸದಾಯಕ ಜಯ ದೊರಕಿದೆ. ಇನ್ನು ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದು ಬೀಗಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಬಿಟ್ಟುಕೊಟ್ಟಿದ್ದ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ ಅವರು ದಿನೇಶ್ ಹೆಗ್ಡೆ ಮೊಳಹಳ್ಳಿ ಸೋಲಿನ ರುಚಿ ತೋರಿಸಿದ್ದಾರ.

ಬೈಂದೂರು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಸಮಾಧಾನದ ನಡುವೆಯೂ ಬಿಜೆಪಿಯ ಹೊಸ ಮುಖ, ಸಂಘದ ಕಾರ‍್ಯಕರ್ತ ಗುರುರಾಜ ಶೆಟ್ಟಿ ಗಂಟಿಹೊಳಿ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿಯವರಿಗೆ ಸೋಲಾಗಿದೆ.

ಕಾಪು ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ವಿರುದ್ದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಜಯ ಸಾಧಿಸಿದ್ದಾರೆ.

No Comments

Leave A Comment