ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ಸಾವು

ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಎಮ್ಮೆಗಳು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ಮಧ್ಯರಾತ್ರಿ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.

ಗೂಡ್ಸ್ ರೈಲು ಕಂಕನಾಡಿ ನಿಲ್ದಾಣದಿಂದ ಮಂಗಳೂರು ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್(ಎಂಸಿಎಫ್) ಕಡೆಗೆ ತೆರಳುತ್ತಿದ್ದ ವೇಳೆ ಈ ಭೀಕರ ಅಪಘಾತ ನಡೆದಿದೆ ಎಂದು ರೈಲ್ವೆ ಪೊಲೀಸ್ ಮೂಲಗಳು ತಿಳಿಸಿವೆ.

ಎಮ್ಮೆಗಳಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಕೆಲವು ಎಮ್ಮೆಗಳು 25ಕ್ಕೂ ಹೆಚ್ಚು ಆಳದ ಕಮರಿಗೆ ಬಿದ್ದು ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ.

No Comments

Leave A Comment