ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಜೂನ್ 4 ರಂದು ಕೇರಳಕ್ಕೆ ಅಪ್ಪಳಿಸಲಿದೆ ಮುಂಗಾರು

ನವದೆಹಲಿ: ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಂಗಳವಾರ ಮುನ್ಸೂಚನೆ ನೀಡಿದೆ.

ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಮಾನ್ಸೂನ್ ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ವಿಕಸನಗೊಳ್ಳುತ್ತಿರುವ ಎಲ್ ನಿನೋ ಪರಿಸ್ಥಿತಿಗಳ ಹೊರತಾಗಿಯೂ ನೈಋತ್ಯ ಮುಂಗಾರು ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಳೆದ ತಿಂಗಳು ಹೇಳಿತ್ತು.

No Comments

Leave A Comment