ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ಮಧ್ಯೆ ಹಿಂಸಾಚಾರ: 16 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 16 ಜನರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕಲ್ಲಿದ್ದಲು ಗಣಿಯ ಗಡಿರೇಖೆಯ ವಿಷಯದಲ್ಲಿ ಕೋಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ಬುಡಕಟ್ಟು ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಕಳೆದ ರಾತ್ರಿ ವಿವಾದ ಉಂಟಾಗಿ ತೀವ್ರ ಘರ್ಷಣೆ ಏರ್ಪಟ್ಟಿತು ಎಂದು ಪೊಲೀಸ್ ಅಧಿಕಾರಿಗಳು ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಎರಡು ಬುಡಕಟ್ಟು ಗುಂಪುಗಳ ನಡುವಿನ ದೀರ್ಘಕಾಲದ ವಿವಾದದಿಂದಾಗಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಬುಡಕಟ್ಟು ಜನಾಂಗದವರನ್ನು ರಾಜಿ ಮಾಡಲು ಜಿರ್ಗಾ, ಸ್ಥಳೀಯ ಬುಡಕಟ್ಟು ನ್ಯಾಯಾಲಯದ ಹಲವಾರು ಸಭೆಗಳನ್ನು ನಡೆಸಿದರೂ ವಿಫಲವಾಗಿತ್ತು.

ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ವಿವಾದಿತ ಕಲ್ಲಿದ್ದಲು ಗಣಿಯನ್ನು ಕಾನೂನು ಜಾರಿ ಸಂಸ್ಥೆಗಳು ನಿಯಂತ್ರಣಕ್ಕೆ ತೆಗೆದುಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ, ಕೆಲವು ಆರೋಪಿಗಳು ಗುಂಡು ಹಾರಿಸಿದ ನಂತರ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

No Comments

Leave A Comment