Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಹೊತ್ತಿ ಉರಿದ ಬಸ್ – ಪಾರಾದ ಮೂವರು

ಮಂಗಳೂರು:ಮೇ 17. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದೆ ಖಾಸಗಿ ಬಸ್ ಏಕಾಏಕಿ ಹೊತ್ತಿ ಉರಿದಿದ್ದು ಬಸ್ಸಿನಲ್ಲಿದ್ದ ಮೂವರು ಜಿಗಿದು ಜೀವ ರಕ್ಷಿಸಿಕೊಂಡಿರುವ ಪಾರಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.

ಸುರತ್ಕಲ್ ಸಮೀಪದ ಓಎಂಪಿಎಲ್ ಗೆ ಸಿಬಂದಿಗಳನ್ನು ಕರೆದೊಯ್ಯುವ ಬಸ್ಸು ಮಧ್ಯಾಹ್ನ 2.45ರ ಸುಮಾರಿಗೆ ಕಟೀಲು ದೇವಸ್ಥಾನದ ಎದುರು ರಾಜ್ಯ ಹೆದ್ದಾರಿಯಲ್ಲಿ ನಿಲ್ಲಿಸಿದ್ದು ಶಾರ್ಟ್ ಸರ್ಕ್ಯೂಟ್ ನಿಂದ ಏಕಾಏಕಿ ಹೊತ್ತಿ ಉರಿದಿದೆ.

ಕಟೀಲು ರೂಟ್ ನಲ್ಲಿ ಚಲಿಸುವ ಬಸ್ ಓಎಂಪಿಎಲ್ ನೌಕರರನ್ನು ಬಿಟ್ಟು ಹಿಂದಿರುಗುವ ಈ ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಚಾಲಕ್ ಅಹಾಗೂ ಇನ್ನಿತರ ಇಬ್ಬರು ಬಸ್ಸಿನಿಂದ ಜಿಗಿದು ಪವಾಡ ಸದೃಶ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ

ಘಟನೆಯಿಂದ ದೇವಳದ ಆವರಣ ಹಾಗೂ ಸ್ಥಳೀಯರು ಭಯಭೀತರಾಗಿದ್ದು ಕೂಡಲೇನೀರು ಸರಬರಾಜು ಮಾಡುವ ಮೂರು ಕಾವೇರಿ ವಿಶ್ವನಾಥ ಎಂಬುವವರ ನೀರಿನ ಟ್ಯಾಂಕರ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment