Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್, 8 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಪರಮೇಶ್ವರ್, ಮುನಿಯಪ್ಪ, ಎಂಬಿ ಪಾಟೀಲ್ ಸೇರಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ
ಅಂತೆಯೇ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಡಾ.ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಎಂಬಿ ಪಾಟೀಲ್ ಸೇರಿದಂತೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ.ಪರಮೇಶ್ವರ್​ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಪರಮೇಶ್ವರ್​ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಕೆಜೆ ಜಾರ್ಜ್ ಮತ್ತು ಎಂಬಿ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಅಪ್ಪ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ನಲ್ಲಿ ಜಮೀರ್ ಪ್ರತಿಜ್ಞಾವಿಧಿ ಸ್ವೀಕಾರ
ಇನ್ನು ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ 8 ಸಚಿವರ ವಿವರ

  1. ಎಂ. ಬಿ. ಪಾಟೀಲ್ (ಲಿಂಗಾಯತ)

  2. ಡಾ. ಜಿ. ಪರಮೇಶ್ವರ್ (ದಲಿತ ಬಲ)

  3. ಪ್ರಿಯಾಂಕ ಖರ್ಗೆ (ದಲಿತ ಬಲ)

  4. ಕೆ.ಎಚ್. ಮುನಿಯಪ್ಪ (ದಲಿತ ಎಡ)

  5. ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್)

  6. ಸತೀಶ್ ಜಾರಕಿಹೊಳಿ (ಪರಿಶಿಷ್ಠ ಪಂಗಡ) (ವಾಲ್ಮಿಕಿ)

  7. ಜಮೀರ್ ಅಹ್ಮದ್ ಖಾನ್ (ಮುಸ್ಲಿಂ)

  8. ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ)

No Comments

Leave A Comment