ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಮೊದಲ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಐದು ಗ್ಯಾರಂಟಿ ಯೋಚನೆಗಳ ಅನುಷ್ಠಾನ ಕುರಿತಂತೆ ಹೆಚ್ಚಿನ ವಿವರಗಳು ಹಾಗೂ ಗ್ಯಾರಂಟಿಗಳಿಗೆ ಇರುವ ಷರತ್ತುಗಳು ಮತ್ತು ನಿಯಮಗಳನ್ನು ಮುಂದಿನ ಸಭೆಗಳಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಐದು ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕಟ್ಟುನಿಟ್ಟಾದ ತೆರಿಗೆ ಸಂಗ್ರಹ ಮೂಲಕ ನಾವು ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳುತ್ತೇವೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್​ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.

kiniudupi@rediffmail.com

No Comments

Leave A Comment