ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ನೇಮಕ

ಬೆಂಗಳೂರು:ಮೇ 20. ಕೇಂದ್ರ ಸರಕಾರವು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 22ರಿಂದ ಅವರನ್ನು ರಾಜ್ಯ ಸರಕಾರಿ ಸೇವೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.

ಗೃಹ ರಕ್ಷಕ ದಳದ ರಾಜ್ಯ ಪೊಲೀಸ್ ಮಹಾನಿರ್ದೇಶಕರರಾದ ಡಾ. ಅಲೋಕ್ ಮೋಹನ್ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ನೇಮಕಗೊಳ್ಳಲಿದ್ದಾರೆ. ಮೇ 22ರಿಂದ ಪೊಲೀಸ್ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಲಿದ್ದಾರೆ.

ಬಿಹಾರ ಮೂಲದ ಡಾ.ಅಲೋಕ್ ಮೋಹನ್ ಅವರು 1987ನೆ ಬ್ಯಾಚ್‍ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದು, 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ. ಸದ್ಯ ಹಾಲಿ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದಾರೆ. ಈ ಹಿಂದೆ ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದಾರೆ. 2025ರ ಎಪ್ರಿಲ್‍ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

No Comments

Leave A Comment