Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ಕೆ ಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಸಿಲುಕಿದ ಕಾರು- 4 ರಕ್ಷಣೆ, ಮಹಿಳೆ ಅಸ್ವಸ್ಥ

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ಆಲಿಕಲ್ಲು ಸಹಿತ ಧಾಕಾರಾಕರ ಮಳೆಯಾಗಿದ್ದು, ಜಲಾವೃತಗೊಂಡಿದ್ದ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ.

ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ನೀರಿನಲ್ಲಿ ಮುಳುಗಿದ್ದ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ. ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ಇಬ್ಬರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಮಳೆಯ ನೀರಿನಲ್ಲಿ ಮುಳುಗಿದ್ದ ಓರ್ವ ಮಹಿಳೆ ತೀವ್ರ ಅಸ್ವಸ್ಥರಾಗಿದ್ದಾರೆ. ಅವರನ್ನು ಕೂಡಲೇ ಸೇಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಭಾರಿ ಮಳೆಗೆ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ಮುಂಭಾಗದಲ್ಲಿ ಕಾರು, ಬೈಕ್ ಮೇಲೆ ಬೃಹತ್ ಮರ ಬಿದ್ದಿದ್ದು, ಕುಮಾರ ಕೃಪಾ ರಸ್ತೆಯನ್ನು ಬಂದ್ ಮಾಡಲಾಗಿದೆ.

ಮೆಜಸ್ಟಿಕ್, ಕೆಆರ್ ಮಾರುಕಟ್ಟೆ, ಮಲ್ಲೇಶ್ವರಂ, ನಾಗರಭಾವಿ, ಕಾಮಾಕ್ಷಿ ಪಾಳ್ಯ, ಗಿರಿನಗರ, ಜಯನಗರ, ವಿಜಯನಗರ, ಎಲೆಕ್ಟ್ರಾನಿಕ್ ಸಿಟಿ, ಯಶವಂತಪುರ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್ ಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ.

No Comments

Leave A Comment