ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ  ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

kiniudupi@rediffmail.com

No Comments

Leave A Comment