ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ದೆಹಲಿಯಲ್ಲಿ ಭಾರಿ ಮಳೆ; ವಿಮಾನ ಸಂಚಾರದ ಮೇಲೆ ಪರಿಣಾಮ, ಇಂದು ಹೆಚ್ಚಿನ ಮಳೆ ಮುನ್ಸೂಚನೆ
ನವೆದೆಹಲಿ: ಇಂದು ಬೆಳಿಗ್ಗೆ ಸುರಿದ ಭಾರಿ ಮಳೆ ಮತ್ತು ಜೋರಾದ ಗಾಳಿಯಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಶಾಖದ ಅಲೆಯಿಂದಾಗಿ ಕೊಂಚ ತಂಪೆರೆದಂತಾಗಿದೆ. ಆದರೆ, ಶನಿವಾರ ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದಲ್ಲಿ ಹಲವಾರು ಮರಗಳು ಧರೆಗುರುಳಿವೆ.
ರಾಷ್ಟ್ರ ರಾಜಧಾನಿ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ ಸಮೀಪದ ಪ್ರದೇಶಗಳಿಗೆ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ. ಮಂಗಳವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು.
‘ಮಳೆ ಮೋಡಗಳ ಸಮೂಹವು ದೆಹಲಿ-ಎನ್‌ಸಿಆರ್ ಮೂಲಕ ಹಾದುಹೋಗುತ್ತಿದೆ. ಅದರ ಪರಿಣಾಮವಾಗಿ, ಗುಡುಗು ಸಹಿತ ಸಾಧಾರಣ ಮಳೆಯಿಂದ ತೀವ್ರತೆಯ ಮಳೆಯಾಗುವ ಮತ್ತು ಗಂಟೆಗೆ 40-70 ಕಿಮೀ ವೇಗದಲ್ಲಿ ಗಾಳಿಯು ದೆಹಲಿ-ಎನ್‌ಸಿಆರ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಮುಂದಿನ 2 ಗಂಟೆಗಳಲ್ಲಿ ಮುಂದುವರಿಯುತ್ತದೆ’ ಎಂದು ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿದೆ.
ಅಲ್ಲದೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯು ಇದೆ ಮತ್ತು ಟ್ರಾಫಿಕ್ ಜಾಮ್ ಅಥವಾ ಯಾವುದೇ ಅಹಿತಕರ ಘಟನೆಯನ್ನು ತಪ್ಪಿಸಲು ಕ್ರಮಗಳನ್ನು ಸೂಚಿಸಿದ್ದಾರೆ.
ಹವಾಮಾನ ವೈಪರೀತ್ಯದಿಂದಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಪ್ರಯಾಣಿಕರಿಗೆ ಸೂಚಿಸಲಾಗಿದೆ. ಪ್ರತಿಕೂಲ ಹವಾಮಾನದ ಕಾರಣದಿಂದ ಒಳಬರುವ ನಾಲ್ಕು ವಿಮಾನಗಳನ್ನು ಜೈಪುರಕ್ಕೆ ತಿರುಗಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ವಾರದ ಆರಂಭದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಗಡಿಯನ್ನು ದಾಟಿ, ದೆಹಲಿಯಲ್ಲಿ ವಿದ್ಯುತ್ ಬೇಡಿಕೆಯನ್ನು ಹೆಚ್ಚಿಸಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ಮಂಗಳವಾರದವರೆಗೆ ನಗರದಲ್ಲಿ ಅಂತಹ ಸುಡುವ ಶಾಖ ಕಾಣಿಸುವುದಿಲ್ಲ. ದೆಹಲಿಯ ಗರಿಷ್ಠ ತಾಪಮಾನ ನಿನ್ನೆ 34.5 ಡಿಗ್ರಿ ಸೆಲ್ಸಿಯಸ್ ಆಗಿದ್ದು, ಇದು ಸಾಮಾನ್ಯಕ್ಕಿಂತ ಐದು ಹಂತ ಕಡಿಮೆಯಾಗಿದೆ.
ಗರಿಷ್ಠ ತಾಪಮಾನವು ಬಯಲು ಪ್ರದೇಶದಲ್ಲಿ 40 ಡಿಗ್ರಿ, ಕರಾವಳಿ ಪ್ರದೇಶಗಳಲ್ಲಿ 37 ಡಿಗ್ರಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಕನಿಷ್ಠ 4.5 ಡಿಗ್ರಿಗಳಷ್ಟು ನಿರ್ಗಮನದೊಂದಿಗೆ 30 ಡಿಗ್ರಿ ತಲುಪಿದಾಗ ಶಾಖದ ಅಲೆಯನ್ನು ಘೋಷಿಸಲಾಗುತ್ತದೆ.
ವಾಯುವ್ಯ ಭಾರತವು ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಗರಿಷ್ಠ ತಾಪಮಾನವನ್ನು ಕಾಣುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ಈ ತಿಂಗಳ ಆರಂಭದಲ್ಲಿ ಭವಿಷ್ಯ ನುಡಿದಿದೆ. ಇದು ಈ ವರ್ಷ ಸಾಮಾನ್ಯ ಮಾನ್ಸೂನ್ ಮಳೆಯನ್ನು ನಿರೀಕ್ಷಿಸುತ್ತಿದೆ. ಆದರೆ, ಮುಂಗಾರು ಆಗಮನದಲ್ಲಿ ಸ್ವಲ್ಪ ವಿಳಂಬವಾಗಿದೆ.