Log In
BREAKING NEWS >
ಉಡುಪಿಯ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಗುರುವಾರದ೦ದು ಅದ್ದೂರಿಯ ಅಕ್ಕಿಮುಹೂರ್ತ ಕಾರ್ಯಕ್ರಮ ಸ೦ಪನ್ನ.....

ಮಂಗಳೂರು: ಪ್ರವೀಣ್‌ ನೆಟ್ಟಾರು ಪತ್ನಿ ನೌಕರಿಗೆ ಕುತ್ತು – ನೇಮಕಾತಿ ರದ್ದುಗೊಳಿಸಿ ಆದೇಶ

ಮಂಗಳೂರು:ಮೇ 27, ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿಗೆ ಅನುಕಂಪದ

ಆಧಾರದ ಮೇಲೆ ನೀಡಿದ್ದ ನೌಕರಿಗೆ ಕುತ್ತು ಬಂದಿದೆ.ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಕುಮಾರಿ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಹಿಂದಿನ ಸರ್ಕಾರ ಮಾಡಿದ ಎಲ್ಲ ತಾತ್ಕಾಲಿಕ ನೇಮಕಾತಿ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೂತನ ಕುಮಾರಿ ಅವರನ್ನು ಶುಕ್ರವಾರದಿಂದ ಜಾರಿಗೆ ಬರುವಂತೆ ಕೆಲಸದಿಂದ ತೆಗೆದು ಹಾಕಲಾಗಿದೆ.

ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ ಹೀಗಾಗಿ ನೇಮಕಾತಿ ರದ್ದಾಗಿದೆ.

No Comments

Leave A Comment