Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆ

ನವದೆಹಲಿ: ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಪಟ್ಟುಹಿಡಿದು ಹಲವು ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ.

ನೂತನ ಸಂಸತ್ ಭವನ ಉದ್ಘಾಟನೆ ವೇಳೆ ಕುಸ್ತಿಪಟುಗಳು ಪ್ರತಿಭಟನೆ ನಡೆಸುವ ಸಾಧ್ಯತೆಗಳಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಇದರಂತೆ ದೆಹಲಿ ಮೆಟ್ರೋದ ಕೇಂದ್ರ ಸಚಿವಾಲಯ ಮತ್ತು ಉದ್ಯೋಗ್ ಭವನ ನಿಲ್ದಾಣಗಳಲ್ಲಿನ ಎಲ್ಲಾ ಪ್ರವೇಶ ಮತ್ತು ನಿರ್ಗಮನ ಗೇಟ್‌ಗಳನ್ನು ಅಧಿಕಾರಿಗಳು ಬಂದ್ ಮಾಡಿದ್ದರು.

ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಯಲ್ಲಿ ಯಾವುದೇ ಸಮಸ್ಯೆಗಳಾಗಲು ನಾವು ಬಿಡುವುದಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಆಯುಕ್ತ ದೇಪೇಂದ್ರ ಪಾಠಕ್ ಅವರು ಹೇಳಿದ್ದಾರೆ.

No Comments

Leave A Comment