Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ಮಂಗಳೂರು: ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ 1.69 ಕೋಟಿ ರೂ. ಮೌಲ್ಯದ ವಜ್ರದ ಹರಳು ಜಪ್ತಿ

ಮಂಗಳೂರು:ಮೇ 28.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾದಿಂದ ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಭದ್ರತಾ ತಪಾಸಣೆಯ ವೇಳೆ ಸಿಐಎಸ್ಎಫ್ ಸಿಬಂದಿ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರನ್ನು ತಡೆದಿದ್ದು, ಬೆಲೆಬಾಳುವ ಹರಳುಗಳಿರುವ ಶಂಕೆಯ ಮೇರೆಗೆ ಆತನ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ 2 ಪೌಚ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಕಾಸರಗೋಡು ಮೂಲದ ಪ್ರಯಾಣಿಕನನ್ನು ಹೆಚ್ಚಿನ ತನಿಖೆಗಾಗಿ ಸಿಐಎಸ್‌ಎಫ್ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಎರಡು ಪೌಚ್‌ಗಳಲ್ಲಿ ಒಟ್ಟು 306.21 ಕ್ಯಾರೆಟ್‌ಗಳಷ್ಟು ತೂಕದ ವಿವಿಧ ಗಾತ್ರದ ವಜ್ರಗಳೊಂದಿಗೆ 13 ಚಿಕ್ಕ ಪ್ಯಾಕೆಟ್‌ಗಳು ಕಂಡುಬಂದಿದ್ದು, ಇದರ ಮೌಲ್ಯ ರೂ.1.69 ಕೋಟಿಯಾಗಿದೆ.

No Comments

Leave A Comment