ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ, ಹೊತ್ತಿ ಉರಿದ ಲಾರಿಗಳು

ಹಾವೇರಿ: ಬಟ್ಟೆ ತುಂಬಿದ ಲಾರಿಗೆ ಮತ್ತೊಂದು ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಲಾರಿಗಳು ಹೊತ್ತಿ ಉರಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಬಳಿ ನಡೆದಿದೆ.

ಶಿಗ್ಗಾಂವಿ ಪಟ್ಟಣದ ರಂಭಾಪುರಿ ಕಾಲೇಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

ಬಟ್ಟೆ ತುಂಬಿದ ಲಾರಿಗೆ ಹಿಂದಿನಿಂದ ಸ್ಪಿರಿಟ್ ಲಾರಿ ಗುದ್ದಿದೆ. ಪರಿಣಾಮ ಲಾರಿಯಲ್ಲಿದ್ದ ಸ್ಪಿರಿಟ್ ಸೋರಿಕೆಯಾಗಿ ಎರಡು ಲಾರಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಎರಡು ಲಾರಿಗಳು ಹುಬ್ಬಳ್ಳಿಯ ಕಡೆ ಹೋಗುತ್ತಿದ್ದವು ಎನ್ನಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಘಟನೆಯಲ್ಲಿ ಲಾರಿಯಲ್ಲಿದ್ದ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿಗ್ಗಾಂವಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಝ ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

No Comments

Leave A Comment