``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ

ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ಸಂಪೂರ್ಣ ಉಚಿತವಾಗಿದ್ದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ರಾಜ್ಯದ ಜನತೆಗೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ಯಾವುದೇ ಷರತ್ತುಗಳಿಲ್ಲದೆ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಸರ್ಕಾರಿ ಬಸ್ಸುಗಳಲ್ಲಿ ಬಿಪಿಎಲ್ ಕಾರ್ಡು ಇದ್ದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಿಸಬಹುದು ಎಂಬ ಷರತ್ತು ವಿಧಿಸಿಲ್ಲ. ಬಿಪಿಎಲ್-ಎಪಿಎಲ್ ಕಾರ್ಡು ಹೊಂದಿರುವ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ ಎಂದರು.

ಯೋಜನೆ ಜಾರಿಗೆ ಪ್ರತಿವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೇ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ಯಾರಂಟಿಯನ್ನು ಜಾರಿಗೊಳಿಸುವ ಬಗ್ಗೆ ರೂಪುರೇಷೆಗಳನ್ನು ಚರ್ಚಸಿದರು.ಸಭೆಯಲ್ಲಿ ಚರ್ಚೆಗೆ ಬಂದ ವಿಷಯಗಳನ್ನು ವರದಿ ರೂಪದಲ್ಲಿ ಮುಖ್ಯಮಂತ್ರಿಗಳ ಮುಂದೆ ಮಂಡಿಸಲಾಗುವುದು. ಅವರು ಈಗಾಗಲೇ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಜೊತೆ ನಿನ್ನೆ ಮಾತನಾಡಿದ್ದಾರೆ. ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಸಿಎಂಗೆ ವರದಿ ಸಲ್ಲಿಸುತ್ತಾರೆ. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಜಾರಿಗೆ ನಿರ್ಧಾರ ಮಾಡುತ್ತಾರೆ ಎಂದರು.

No Comments

Leave A Comment