ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ!

ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ  ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಯತ್ ಒಂದು ವರ್ಷದ ಹಿಂದೆ ವಿವಾಹಿತರಾಗಿದ್ದು.

ಸದ್ಯ ಚಿಕ್ಕಮಗಳೂರಿನಲ್ಲಿರುವ ಪತಿ ಮನೆಯಲ್ಲಿದ್ದರು. ಎದೆ ನೋವಿನ ಕಾರಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಅವರು ಮೃತಪಟ್ಟಿದ್ದು, ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿ ಪಡೆದಿದ್ದ ಇವರು, ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದರು.

ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡ  ದ್ವಿತೀಯ ಸ್ಥಾನ ಗಳಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.

ಮುಂದೆ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣವನ್ನು ಎಸ್.ಡಿ.ಎಂ. ಕಾಲೇಜು ಉಜಿರೆಯಲ್ಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯಕ್ಕೆ ಬಹುಬೇಡಿಕೆಯ ವಾಲಿಬಾಲ್ ಆಟಗಾರ್ತಿಯಾಗಿ ಜನಮನ್ನಣೆಗಳಿಸಿದ್ದರು.

ರಾಷ್ಟ್ರದ ವಾಲಿಬಾಲ್ ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಶನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿರುವುದು ಇವರ ಹಿರಿಮೆಯನ್ನು ಹೆಚ್ಚಿಸಿದೆ.

kiniudupi@rediffmail.com

No Comments

Leave A Comment