ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಜಮ್ಮು-ಕಾಶ್ಮೀರ: ಪೂಂಚ್ ಬಳಿ ಗಡಿ ನುಸುಳಲು ಯತ್ನ, ಮೂವರು ಉಗ್ರರ ಬಂಧನ

ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಬಂಧನಕ್ಕೊಳಪಡಿಸಿದೆ.

ಮೇ 30-31 ರ ಮಧ್ಯರಾತ್ರಿ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಅನುಮಾನಾಸ್ಪ ಓಡಾಟಗಳು ಕಂಡು ಬಂಂದ ಹಿನ್ನೆಲೆಯಲ್ಲಿ  ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಸೇನೆಪಡೆಗಳು ಜಂಟಿ ಕಾರ್ಯಾಚರಣೆಗಿಳಿದಿತ್ತು.

ಈ ವೇಳೆ ಬೇಲಿ ದಾಟಲು ಪ್ರಯತ್ನಿಸುತ್ತಿದ್ದ 3 ಉಗ್ರರನ್ನು ಬಂಧಿಸಲುವಲ್ಲಿ ಯಶಸ್ವಿಯಾಗಿದ್ದಾರೆ. ಗಡಿ ನುಸುಳಲು ಯತ್ನಿಸುದ್ದಿದ್ದ ಉಗ್ರರು ಸೇನಾಪಡೆಗಳ ಕಂಡ ಕೂಡಲೇ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು, ದಿಟ್ಟ ಉತ್ತರ ನೀಡಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೂವರು ಉಗ್ರರಿಂದ 10 ಕೆಜಿ ಐಇಡಿ ಮತ್ತು ನಾರ್ಕೊ ಸೇರಿದಂತೆ ಇತರೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

No Comments

Leave A Comment