Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಹಣಕಾಸು ಇಲಾಖೆ ವಿರೋಧ?: ಸಂಪುಟ ಸಭೆ ಜೂ.2ಕ್ಕೆ ಮುಂದೂಡಿಕೆ; ಗ್ಯಾರೆಂಟಿ ಯೋಜನೆ ಜಾರಿ ಖಚಿತ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಐದು ಗ್ಯಾರೆಂಟಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಗಳು ಅತ್ಯಂತ ಮಹತ್ವದ ಸಭೆಯನ್ನು ನಡೆಸಿದರು. ನಂತರ ಮಾತನಾಡಿದ ಅವರು, ಐದು ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಗ್ಯಾರೆಂಟಿ ಯೋಜನೆಗಳ ಆರ್ಥಿಕ ಪರಿಣಾಮ ಸೇರಿದಂತೆ ವಿವರಗಳ ಪ್ರಾತ್ಯಕ್ಷಿಕೆಯನ್ನು ಸಲ್ಲಿಸಿದ್ದಾರೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಇಲಾಖೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಗುರುವಾರ ನಿಗದಿ ಪಡಿಸಲಾಗಿದ್ದ ಸಚಿವ ಸಂಪುಟ ಶುಕ್ರವಾರವಾರಕ್ಕೆ ಮುಂದೂಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ನಡೆಯಲಿದೆ. ಐದು ಗ್ಯಾರಂಟಿಗಳ ಜಾರಿ ಸಂಬಂಧ ಮತ್ತಷ್ಟು ತಯಾರಿ ಅಗತ್ಯ ಹಿನ್ನೆಲೆ ನಾಳೆಯೂ ಕೂಡ ಅಧಿಕಾರಿಗಳು, ಸಚಿವರು ಪ್ರತ್ಯೇಕ ಸಭೆ ನಡೆಸಲಿದ್ದಾರೆ.

ಎಲ್ಲಾ ಗ್ಯಾರೆಂಟಿಗಳ ಜಾರಿಗೆ ಹಣಕಾಸು ಹೊಂದಿಸುವುದು ಕಷ್ಟ ಎಂದು ಹಣಕಾಸು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಒಂದು ದಿನ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

No Comments

Leave A Comment