ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಚಾಮರಾಜನಗರದಲ್ಲಿ ಲಘು ವಿಮಾನ ಪತನ, ಹೊತ್ತಿ ಉರಿದ ಜೆಟ್

ಚಾಮರಾಜನಗರ: ಚಾಮರಾಜನಗರ ತಾಲೂಕಿನ ಎಚ್ ಮೂಕಳ್ಳಿ ಬಳಿ ಗುರುವಾರ ತರಬೇತಿ ನಿರತ ಲಘು ವಿಮಾನವೊಂದು ಪತನವಾಗಿದ್ದು, ಇಬ್ಬರು ಪೈಲಟ್​ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಈ ಲಘು ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.

No Comments

Leave A Comment