Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ, ತಪ್ಪಿದ ಭಾರಿ ಅನಾಹುತ

ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು ಹಳಿಯಲ್ಲಿ ನಿಂತಿತ್ತು. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದ ನಂತರ ಈ ಘಟನೆ ಸಂಭವಿಸಿದೆ. ಹೀಗಾಗಿ ಘಟನೆಯಲ್ಲಿ ಯಾರೊಬ್ಬರಿಗೂ ಹಾನಿಯಾಗಿಲ್ಲ ಎಂದು ಅಗ್ನಿಶಾಮಕ ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

ಆದರೆ, ಇದು ಉದ್ದೇಶಪೂರ್ವಕ ಕೃತ್ಯವೇ ಅಥವಾ ವಿದ್ಯುತ್ ದೋಷವೇ ಬೆಂಕಿ ತಲುಗಲು ಕಾರಣವೇ ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದು ಅವರು ಹೇಳಿದರು.

ಕಣ್ಣೂರು ಅಗ್ನಿಶಾಮಕ ಠಾಣೆಯ ಅಧಿಕಾರಿಯೊಬ್ಬರು ಮಾತನಾಡಿ, ಘಟನೆಯ ಬಗ್ಗೆ ನಮಗೆ ಮುಂಜಾನೆ 1.30 ರ ಸುಮಾರಿಗೆ ಮಾಹಿತಿ ಸಿಕ್ಕಿತು. ನಾವು ಸ್ಥಳಕ್ಕೆ ತಲುಪಿದಾಗ, ಒಂದು ಕೋಚ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಬೆಂಕಿಯ ದೊಡ್ಡ ಜ್ವಾಲೆಗಳು ದಟ್ಟವಾದ ಹೊಗೆಯುಂಟಾಗುವಂತೆ ಮಾಡಿದವು. ಬೆಂಕಿ ನಂದಿಸುವ ಕಾರ್ಯಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳನ್ನು ಬಳಸಿಕೊಳ್ಳಲಾಯಿತು. ಬೆಳಗಿನ ಜಾವ 3.15 ರ ಸುಮಾರಿಗೆ ಬೆಂಕಿಯನ್ನು ನಂದಿಸಲಾಗಿದೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 2 ರಂದು ರಾತ್ರಿ ಕೋಯಿಕ್ಕೋಡ್ ಜಿಲ್ಲೆಯಲ್ಲಿ ದುಷ್ಕರ್ಮಿಯೊಬ್ಬ ಅಲಪ್ಪುವ-ಕಣ್ಣೂರು ಎಕ್ಸಿಕ್ಯುಟಿವ್ ಎಕ್ಸ್‌ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟು, ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.

ಅಂದು ಎಕ್ಸ್‌ಪ್ರೆಸ್ ರೈಲು ಕೋಯಿಕ್ಕೋಡ್‌ನ ಎಲತ್ತೂರ್ ಬಳಿಯ ಕೊರಪುಳ ಸೇತುವೆಯನ್ನು ತಲುಪಿದಾಗ ಆರೋಪಿ ತನ್ನ ಸಹ ಪ್ರಯಾಣಿಕರೊಬ್ಬರಿಗೆ ಬೆಂಕಿ ಹಚ್ಚಿದ್ದ.

No Comments

Leave A Comment