ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಕುಸ್ತಿಪಟುಗಳಿಗೆ ನ್ಯಾಯದೊರಕಿಸಿ ಕೊಡಿ ಇಲ್ಲವಾದಲ್ಲಿ ಸ೦ಬ೦ಧಪಟ್ಟ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಸ್ಥಾನದಿ೦ದ ಕೆಳಗಿಳಿಸಿ

ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನೀಡಿರುವ ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ತನಿಖೆ ಮುಗಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.ಅದರೆ ಅದರಲ್ಲಿ ಯಾರಿಗೂ ವಿಶ್ವಾಸವಿಲ್ಲವೆನ್ನಬೇಕಾಗುತ್ತದೆ ಈ ಬಗ್ಗೆ ಕೂಡಲೇ ನಿರ್ದಾಕ್ಷಣ್ಯಕ್ರಮ ಕೈಕೊ೦ಡು ಕುಸ್ತಿಪಟುಗಳಿಗೆ ನ್ಯಾಯದೊರಕಿಸಿ ಕೊಡದೇ ಇದ್ದರೆ ಕರಾವಳಿಕಿರಣ ಡಾಟ್ ಕಾ೦ ನಿರ೦ತರವಾಗಿ ವಿವಿಧ ರೀತಿಯಲ್ಲಿ ಹೋರಾಟಕ್ಕೆ ಬೆ೦ಬಲವನ್ನು ನೀಡಿ ಮು೦ದಿನ ಲೋಕಸಭಾ ಚುನಾವಣೆಯಲ್ಲಿ ಇ೦ತಹ ವ್ಯಕ್ತಿಗಳು ಚುನಾವಣೆಯಲ್ಲಿ ನಿಲ್ಲದ೦ತೆ ರಾಷ್ಟ್ರವ್ಯಾಪಿ ಚಳವಳಿಯನ್ನು ನಡೆಸಲು ಮು೦ದಾಗಬೇಕಾಗುತ್ತದೆ ಎ೦ದು ಈ ಮೂಲಕ ಕೇ೦ದ್ರ ಸರಕಾರದ ಸ೦ಬ೦ಧಪಟ್ಟ ಇಲಾಖೆಗೆ ಎಚ್ಚರಿಕೆಯನ್ನು ನೀಡುತ್ತಿದೆ.

ಭಾರತೀಯ ಜನತಾ ಪಕ್ಷದ (BJP) ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಫೆಡರೇಶನ್‌ನಿಂದ ವಜಾಗೊಳಿಸುವಂತೆ ಮತ್ತು ಅವರನ್ನು ಬಂಧಿಸುವಂತೆ ಒತ್ತಾಯಿಸಿ ದೇಶದ ಕೆಲವು ಪ್ರಮುಖ ಕುಸ್ತಿಪಟುಗಳು ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಈ ವಿಚಾರದ ಬಗ್ಗೆ ಮಾತನಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿದ ನಂತರ ಕೇಂದ್ರ ಸರ್ಕಾರವು ಈ ವಿಷಯದಲ್ಲಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.ಒ೦ದು ವೇಳೆ ನ್ಯಾಯದೊರಕಿಸಿಕೊಡದೇ ಇದ್ದರೆ ಮು೦ದಿನ ದಿನದಲ್ಲಿ ಯಾವುದೇ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಸ್ಪರ್ಧೆಗೆ ಹೋಗದೇ ಇರಲು ನಿರ್ಧಾರವನ್ನು ಕೈಕೊಳ್ಳಲಿದ್ದಾರೆ.

No Comments

Leave A Comment