ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಗುರುವಾರ ಹೇಳಿದರು.

ಜಾರ್ಜ್ ಚು ನೇತೃತ್ವದಲ್ಲಿನ ಫಾಕ್ಸ್ ಕಾನ್ ಕಂಪನಿಯ ಉನ್ನತ ಅಧಿಕಾರಿಗಳ ತಂಡ  ಸೌಜನ್ಯದ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಹಾಜರಿದ್ದರು .ಇದರೊಂದಿಗೆ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿ ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಿದಂತಾಗಿದೆ.

ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದರು.

ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕೆ.ಐ.ಎ‌‌.ಡಿ.ಬಿ.ಗೆ ಪಾವತಿಸಿದೆ.

ಇದಕ್ಕೆ ಮುನ್ನ ಜುಬಿಲಿಯಂಟ್ ಫುಡ್ ವರ್ಕ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್  ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್  ವೆಂಕಟೇಶನ್ ಮತ್ತಿತರರು ಸಚಿವರನ್ನು ಭೇಟಿಯಾಗಿದ್ದರು.

ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ‌ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಇದ್ದರು.

kiniudupi@rediffmail.com

No Comments

Leave A Comment