ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ರೈತರಿಗೆ ಶಾಕ್: ಹಾಲಿನ ಪ್ರೋತ್ಸಾಹ ಧನ ಪ್ರತಿ ಲೀಟರ್​ಗೆ 1.50 ರೂ. ಕಡಿತ

ಬೆಂಗಳೂರು: ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ರೈತರಿಗೆ ಶಾಕ್ ನೀಡಿದ್ದು, ಹಾಲಿನ ಪ್ರೋತ್ಸಾಹ ಧನ ಲೀಟರ್​ಗೆ 1.50 ರೂ. ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಈ ಹಿಂದೆ ಬೆಂಗಳೂರು ಜಿಲ್ಲಾ ಹಾಲು ಒಕ್ಕೂಟ ಬೇಸಿಗೆ ಸಮಯದಲ್ಲಿ ಏಪ್ರಿಲ್ 1 ರಿಂದ ಮೇ 31ರ ವರೆಗೆ  ಪ್ರತಿ ಲೀಟರ್ ಹಾಲಿಗೆ 2.85 ರೂ. ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್ ಹಾಲಿಗೆ 1.50 ರೂಪಾಯಿ ಕಡಿತಗೊಳಿಸಿ ಆದೇಶಿಸಿದೆ.

ಸದ್ಯ, ಉತ್ತಮ ಮಳೆಯಾಗಿ ಹಸಿರು ಮೇವಿನ ಲಭ್ಯತೆ ಜಾಸ್ತಿಯಾಗಿದ್ದು, ಹಾಲು ಉತ್ಪಾದನೆ ಹೆಚ್ಚಾಗುತ್ತಿದೆ. ಏಪ್ರಿಲ್ ತಿಂಗಳ ಆರಂಭದಲ್ಲಿ ಪ್ರತಿದಿನ 13.50 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲು, ಈಗ 16 ಲಕ್ಷ ಲೀಟರ್​ಗೆ ಉತ್ಪಾದನೆಯಾಗುತ್ತಿದೆ. ದಿನಕ್ಕೆ ಸುಮಾರು 2.50 ಲಕ್ಷ ಲೀಟರ್ ಹಾಲು ಉತ್ಪಾದನೆ ಹೆಚ್ಚಳವಾಗಿದ್ದು, ಹಾಗಾಗಿ ಪ್ರೋತ್ಸಾಹ ಧನ ಕಡಿತಗೊಳಿಸಿ ಆದೇಶ ಹೊರಡಿಸಿದೆ.

No Comments

Leave A Comment