ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಹತ್ವದ ಐದು ಗ್ಯಾರಂಟಿಗಳ ಜಾರಿಗೆ ಘೋಷಣೆ ಮಾಡಿದ್ದು, ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ ಎಂದು ಕಾಂಗ್ರೆಸ್ ಹೇಳುವ ಮೂಲಕ ಬಿಜೆಪಿಯ ಕಾಲೆಳೆದಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ನುಡಿದಂತೆ ನಡೆಯುವವರು, ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಹೇಳಿದೆ.
ನಳಿನ್ ಕುಮಾರ್ ಕಟೀಲ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆ ಅವರೇ ನಿಮಗೂ ಪ್ರಯಾಣ ಫ್ರೀ, ಸಿಟಿ ರವಿ ಅವರೇ ನಿಮ್ಮ ಮನೆಯವರೆಗೂ ರೂ. 2,000 ಫ್ರೀ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಲಾಗಿದೆ.