ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಕೆಂಪಣ್ಣ ನೇತೃತ್ವದ ಗುತ್ತಿಗೆದಾರರ ಸಂಘದ ನಿಯೋಗದಿಂದ ಸಿಎಂ ಭೇಟಿ: ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆಗೆ ಮನವಿ

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಬಾಕಿ ಇರುವ 22 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು.

“ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಸೇರಿದಂತೆ ವಿವಿಧ ಇಲಾಖೆ, ನಿಗಮ ಮತ್ತು ಮಂಡಳಿಗಳ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಮೊತ್ತವನ್ನು ಬಿಡುಗಡೆ ಮಾಡದಂತೆಯೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದ ಗುತ್ತಿಗೆದಾರರಿಗೆ ತೀವ್ರ ತೊಂದರೆಯಾಗುವುದರ ಜೊತೆಗೆ ಆರ್ಥಿಕ ನಷ್ಟವನ್ನು ಅನುಭವಿಸಬೇಕಾಗುತ್ತದೆ” ಎಂದು ಸಂಘವು ಹೇಳಿದೆ.

“ಕಾಮಗಾರಿಗಳನ್ನು ನಿಲ್ಲಿಸಿದರೆ ಗುಣಮಟ್ಟ ಕಾಪಾಡಿಕೊಳ್ಳಲು ಅಸಾಧ್ಯವಾಗುತ್ತದೆ. ಅಲ್ಲದೇ, ರಾಜ್ಯದ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಧಕ್ಕೆ ಉಂಟಾಗುತ್ತದೆ. ಕಾನೂನುಬದ್ಧವಾಗಿ ನಡೆಯುತ್ತಿರುವ ಕಾಮಗಾರಿಗಳನ್ನು ಮುಂದುವರಿಸಲು ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಮೊತ್ತವನ್ನು ಬಿಡುಗಡೆ ಮಾಡಲುಲಾಖೆಗಳಿಗೂ ಸೂಚನೆ ನೀಡಬೇಕು” ಎಂದು ನಿಯೋಗ ಮನವಿ ಮಾಡಿಕೊಂಡಿದೆ.

No Comments

Leave A Comment