Log In
BREAKING NEWS >
ಮಾ.28ರ೦ದು ಸ೦ಜೆ 6.30ಕ್ಕೆ ಪಣಿಯಾಡಿ ಶ್ರೀಅನ೦ತಾಸನ ಶ್ರೀಲಕ್ಷ್ಮೀಪದ್ಮನಾಭ ದೇವಸ್ಥಾನದ ವಠಾರದಲ್ಲಿ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಉದ್ಘಾಟನಾ ಸಮಾರ೦ಭ ಜರಗಲಿದೆ....

ಒಡಿಶಾ ರೈಲು ದುರಂತ: ತುರ್ತು ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ದುರ್ಘಟನೆಯಲ್ಲಿ 238ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಅಧಿಕಾರಿಗಳೊಂದಿಗಿನ ತುರ್ತು ಸಭೆ ಬಳಿಕ ಮೋದಿಯವರು ಒಡಿಶಾಗೆ ಭೇಟಿ ನೀಡಲಿದ್ದು, ಅಪಘಾತ ಸಂಭವಿಸಿದ ಸ್ಥಳ ಬಾಲಸೋರ್’ಗೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.

ಈ ನಡುವೆ ಗಾಯಾಳುಗಳ ರಕ್ಷಣಾ ಕಾರ್ಯಾಚರಣೆ, ಚಿಕಿತ್ಸೆಗೆ ನೆರವಾಗಲು ಭಾರತೀಯ ಸೇನಾಪಡೆಗಳನ್ನು ಕೂಡ ಸ್ಥಳದಲ್ಲಿ ನಿಯೋಜನೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

No Comments

Leave A Comment