Log In
BREAKING NEWS >
ಎಲ್ಲೆಡೆಯಲ್ಲಿ ಶಾ೦ತಿಯುತವಾಗಿ ವಿಜೃ೦ಭಣೆಯ ಹನುಮಾನ್ ಜಯ೦ತಿ ಆಚರಣೆ.....

ಬೆಂಗಳೂರು: ಕುಟುಂಬಕ್ಕಿಂತಲೂ ಹೆಚ್ಚು ವೃತ್ತಿಯನ್ನೇ ಪ್ರೀತಿಸುತ್ತಿದ್ದ ಪೀಪಲ್ಸ್‌ ಮ್ಯಾನ್‌ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಇನ್ನಿಲ್ಲ!

ಬೆಂಗಳೂರು: ಕುಟುಂಬ, ಸಂಸಾರಕ್ಕಿಂತಲೂ ಹೆಚ್ಚಾಗಿ ವೃತ್ತಿಯನ್ನೇ ಪ್ರೀತಿಸುತ್ತಿದ್ದ ಜಯನಗರ ಪೊಲೀಸ್ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಭಾನುವಾರ ಲಿವರ್‌ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದಾರೆ.

ಲಿವರ್‌ ಕ್ಯಾನ್ಸರ್‌ ಕೊನೆಯ ಹಂತದಲ್ಲಿರುವಾಗ ತಿಳಿದಿದ್ದು, ಚಿಕಿತ್ಸೆ ಪಡೆಯಲು 15 ದಿನಗಳ ರಜೆ ತೆಗೆದುಕೊಂಡಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಭಾನುವಾರ ಮಧ್ಯಾಹ್ನ ಚಿಕಿತ್ಸೆ ಫಲಿಸದೇ ಮಂಜುನಾಥ್‌ ಸಾವನ್ನಪ್ಪಿದ್ದಾರೆ.

ಹುಟ್ಟೂರು ಹಾಸನಕ್ಕೆ ಇನ್ಸ್ಪೆಕ್ಟರ್ ಮಂಜುನಾಥ್ ಮೃತದೇಹ ರವಾನೆ ಮಾಡಲಾಗಿದ್ದು, ಹಾಸನದಲ್ಲಿ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.  ಇನ್ನು ಮೃತ ಇನ್ಸ್‌ಪೆಕ್ಟರ್ ಮಂಜುನಾಥ್‌ ಅವರಿಗೆ ಕೆಲವು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಂಜುನಾಥ್‌ ಅವರಿಗೆ ಪತ್ನಿ ಹಾಗೂ ಚಿಕ್ಕ ಮಗನಿದ್ದಾನೆ.

ಇನ್ಸ್‌ಪೆಕ್ಟರ್‌ ಮಂಜುನಾಥ್‌ ಇತ್ತೀಚೆಗೆ ಬೆಂಗಳೂರಿನ ಜಯನಗರ ಪೊಲೀಸ್‌ ಠಾಣೆಯಲ್ಲಿ ವೃತ್ತಿ ಮಾಡುತ್ತಿದ್ದರು. ಆದರೆ, ಕಾರ್ಯದಕ್ಷತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಮಂಜುನಾಥ್‌ ಆರೋಗ್ಯದ ಕಡೆಗೆ ಹೆಚ್ಚಾಗಿ ಗಮನ ಹರಿಸಿರಲಿಲ್ಲ. ಹೀಗಾಗಿ, ಆಹಾರ ಮತ್ತು ದಿನನಿತ್ಯದ ದೈಹಿಕ ಚಟುವಟಿಕೆಗಳಿಂದ ಲಿವರ್‌ ಕ್ಯಾನ್ಸರ್‌ ಉಂಟಾಗಿದೆ.

ಹಾಸನ ಮೂಲದವರಾದ ಮಂಜುನಾಥ್ ಯುಆರ್ 2007ನೇ ಬ್ಯಾಚ್ ನ ಪೊಲೀಸ್ ಇನ್ಸ್ಪೆಕ್ಟರ್ ಆಗಿ ವೃತ್ತಿಗೆ ಸೇರಿಕೊಂಡಿದ್ದರು. ಕಳೆದ 2021 ರಲ್ಲಿ ಮುಖ್ಯಮಂತ್ರಿ ಪದಕಕ್ಕೂ ಭಾಜನರಾಗಿದ್ದರು. ರಾಜ್ಯದ ಮೈಸೂರು ಪೊಲೀಸ್ ಅಕಾಡೆಮಿಯಲ್ಲಿ ತಮ್ಮ ಮೊದಲ ಕೆಲಸವನ್ನು ಪ್ರಾರಂಭಿಸಿದರು. ಪೊಲೀಸ್ ಅಕಾಡೆಮಿಯಲ್ಲಿ ಯಶಸ್ವಿಯಾದ ನಂತರ ಬೆಳಗಾವಿ, ಚಾಮರಾಜನಗರ, ಬೇಲೂರು ಮತ್ತು ಕರ್ನಾಟಕದ ಹಲವಾರು ಭಾಗಗಳಲ್ಲಿ ಕೆಲಸ ಮಾಡಿದರು.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ತಮ್ಮ 15 ವರ್ಷಗಳ ಸೇವೆಯಲ್ಲಿ ಹಲವಾರು ಪ್ರಕರಣಗಳನ್ನು ಪರಿಹರಿಸಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿದ್ದಾರೆ. ಅವರನ್ನು ಕೆಲವೆಡೆ ಪೀಪಲ್ಸ್ ಮ್ಯಾನ್ ಎಂದು ಕರೆಯಲಾಗುತ್ತಿತ್ತು. ಜೊತೆಗೆ, ರಾಜ್ಯದ ಹಲವಾರು ಸಂಸ್ಥೆಗಳಿಂದ ಗುರುತಿಸಿ ಸನ್ಮಾನಿಸಲಾಗಿತ್ತು.

No Comments

Leave A Comment