ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಐದು ಗ್ಯಾರಂಟಿಗಳ ಜಾರಿಗೆ ತರುವ ಮಾತನ್ನು ಉಳಿಸಿಕೊಂಡಿದ್ದೇವೆ – ಪ್ರಖ್ಯಾತ್ ಶೆಟ್ಟಿ

ಉಡುಪಿ: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ ಎಂದು ಉಡುಪಿಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ.

ಸರಕಾರ ಅಸ್ತಿತ್ವಕ್ಕೆ ಬಂದ ಎರಡು ವಾರಗಳಲ್ಲಿ ನೀಡಿ ಭರವಸೆಯಂದ ಐದೂ ಗ್ಯಾರಂಟಿಗಳ ಅನುಷ್ಠಾನ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಐತಿಹಾಸಿಕ ನಿರ್ಧಾರ ಮಾಡಿದ್ದು ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. . ಚುನಾವಣೆಗೆ ಮುಂಚೆ ಏನನ್ನು ಹೇಳಿದ್ದೆವೋ ಅದನ್ನೀಗ ಮಾಡಿ ತೋರಿಸಿದ್ದೇವೆ. ಇವೆಲ್ಲವೂ ಈಗ ನಿಗದಿಪಡಿಸಿರುವ ದಿನಾಂಕದಿಂದ ಪೂರ್ಣಪ್ರಮಾಣದಲ್ಲಿ ಮತ್ತು ಸಮರ್ಪಕವಾಗಿ ಜಾರಿಗೆ ಬರಲಿವೆ. ಜನರನ್ನು ದಾರಿ ತಪ್ಪಿಸುವುದನ್ನೇ ಉದ್ಯೋಗ ಮಾಡಿಕೊಂಡಿರುವ ಬಿಜೆಪಿ ಇನ್ನಾದರೂ ರಚನಾತ್ಮಕವಾಗಿ ಕೆಲಸ ಮಾಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No Comments

Leave A Comment