ಕೆಎಸ್ಆರ್ ಟಿಸಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ತಮ್ಮ ಆಧಾರ್ ತೋರಿಸಬೇಕು
ದಾವಣಗೆರೆ/ಚಿತ್ರದುರ್ಗ: ಜೂನ್ 11 ರಿಂದ ಜಾರಿಗೆ ಬರಲಿರುವ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ನಿಗಮಗಳ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ತೋರಿಸಬೇಕು. ರಾಜ್ಯ ಸರ್ಕಾರ ಕರ್ನಾಟಕದ ನಿವಾಸಿಗಳಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ. ಹೀಗಾಗಿ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ತೋರಿಸಬೇಕಾಗಿದೆ.
ಮಹಿಳೆ ಕರ್ನಾಟಕ ಮೂಲದವಾರಿದ್ದು, ರಾಜ್ಯದ ಯಾವುದೇ ನಗರಕ್ಕೆ ತನ್ನ ವಿಳಾಸವನ್ನು ಬದಲಾಯಿಸಿದರೂ ಉಚಿತ ಪ್ರಯಾಣಕ್ಕೆ ಅರ್ಹರಾಗಿರುತ್ತಾರೆ. ಸರ್ಕಾರಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರು ಆಧಾರ್ ಕಾರ್ಡ್ ತೋರಿಬೇಕು ಮತ್ತು ಕಂಡಕ್ಟರ್ ಅವರಿಗೆ ‘ಶೂನ್ಯ’ ದರದ ಟಿಕೆಟ್ ನೀಡುತ್ತಾರೆ.
ಇದನ್ನು ಓದಿ: ಐದು ಗ್ಯಾರಂಟಿ ಘೋಷಣೆ: ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ
“ಶಕ್ತಿ ಯೋಜನೆಯ ಅನುಷ್ಠಾನದ ವಿಧಾನಗಳು ಕೆಎಸ್ಆರ್ ಟಿಸಿ ಪ್ರಧಾನ ಕಚೇರಿಯಿಂದ ನಮಗೆ ಇನ್ನೂ ಬಂದಿಲ್ಲ. ಸರ್ಕಾರದ ನಿರ್ದೇಶನದ ಆಧಾರದ ಮೇಲೆ ಯೋಜನೆಯನ್ನು ಜಾರಿಗೊಳಿಸಲಾಗುವುದು.
“ಮಹಿಳೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಅಥವಾ ಇತರ ಯಾವುದೇ ರಾಜ್ಯದವರಾಗಿದ್ದರೂ ಸಹ, ಅವರು ತಮ್ಮ ವಿಳಾಸವನ್ನು ಕರ್ನಾಟಕಕ್ಕೆ ವರ್ಗಾಯಿಸಿದರೆ ಉಚಿತ ಪ್ರಯಾಣಕ್ಕೆ ಅರ್ಹರು” ಎಂದು ಕೆಎಸ್ಆರ್ ಟಿಸಿ ವಿಭಾಗೀಯ ನಿಯಂತ್ರಕ ಸಿದ್ದೇಶ್ವರ ಹೆಬ್ಬಾಳ್ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.
“ಟಿಕೆಟ್ ನೀಡುವ ಯಂತ್ರಗಳನ್ನು ಮರುಮಾಪನ ಮಾಡಲಾಗುತ್ತಿದೆ ಮತ್ತು ಮಹಿಳಾ ಪ್ರಯಾಣಿಕರಿಗೆ ಟಿಕೆಟ್ ನೀಡುವ ಬಗ್ಗೆ ಕಂಡಕ್ಟರ್‌ಗಳಿಗೆ ತರಬೇತಿ ನೀಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವು ಚುನಾವಣೆಗೆ ಮುನ್ನ ಕಾಂಗ್ರೆಸ್ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ.